ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಇಂದು ರಜೆ ಘೋಷಿಸಿದ್ದು, ನಗರದಲ್ಲಿ ಆಗಸ್ಟ್ 18ರ ಸಂಜೆವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.
ಈ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಇಂದು ನಡೆಯಬೇಕಾಗಿದ್ದ ಎಂ ಎಸ್ಸಿ ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.