ಚೆನ್ನೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ IPL ಇಂದಿನಿಂದ ಆರಂಭಗೊಳ್ಳಲಿದ್ದು, ಚೆನ್ನೈ ಎಂ ಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಆರ್‌ಸಿಬಿ ತಂಡವನ್ನು ಎದುರಿಸಲಿದ್ದು, ಬಲಿಷ್ಠ ಮುಂಬೈ ತಂಡಕ್ಕೆ ಸೆಡ್ಡು ಹೊಡೆಯಲು ವಿರಾಟ್ ಬಳಗ ಸಿದ್ಧವಾಗಿದೆ. ಇನ್ನು 2 ತಂಡಗಳು ಒಟ್ಟು 27 ಬಾರಿ ಮುಖಾಮುಖಿಯಾಗಿದ್ದು, ಮುಂಬೈ 17 ಪಂದ್ಯಗಳಲ್ಲಿ ಹಾಗೂ ಆರ್‌ಸಿಬಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
IPL 2021: ಇಂದಿನ ಪಂದ್ಯದ ಸಂಭಾವ್ಯ ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ ವೆಲ್, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಕೈಲ್ ಜಾಮಿಸನ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಕೇನ್ ರಿಚರ್ಡ್ಸನ್, ಆಡಮ್ ಜಂಪಾ, ಸಚಿನ್ ಬೇಬಿ, ಶ್ರೀಕರ್ ಭರತ್, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಫಿನ್ ಅಲೆನ್, ಸುಯಾಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಪಿಯೂಷ್ ಚಾವ್ಲ , ಸೌರಭ್ ತಿವಾರಿ, ಆದಿತ್ಯ ತಾರೆ, ಆಡಮ್ ಮಿಲ್ನೆ, ಕ್ರಿಸ್ ಲಿನ್, ಜಯಂತ್ ಯಾದವ್, ಅನ್ಮೊಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಮೊಹ್ಸಿನ್ ಖಾನ್, ಅರ್ಜುನ್ ತೆಂಡೂಲ್ಕರ್, ಮಾರ್ಕೊ ಜಾನ್ಸೆನ್, ಯುಧ್ವೀರ್ ಸಿಂಗ್
IPL2021: MI-RCB ಫೈಟ್: ಪಂದ್ಯದ ವಿವರ
ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಲಿವೆ. ಪಂದ್ಯವು ಸಂಜೆ 7:30ಕ್ಕೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದ್ದು, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ. ಜೊತೆಗೆ ಟಿವಿ9 ಡಿಜಿಟಲ್ ಲೈವ್ ಅಪ್ಡೆಟ್ನಲ್ಲಿ ನೀವು ಲೈವ್ ಸ್ಕೋರ್ ಸಹ ಕಾಣಬಹುದಾಗಿದೆ.