ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಎರಡು ದಿನ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಸಿಲ ಧಗೆಯ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಇನ್ನು, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ,ಗದಗ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು (ಗ್ರಾ), ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿನ ಶಿವಮೊಗ್ಗ, ಹಾಸನ, ಅಲ್ಲಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.