Tractor subsidy : ಕೇಂದ್ರ ಸರ್ಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ನಡೆಸುತ್ತಿದ್ದು, ಇದರಲ್ಲಿ ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ (Tractor subsidy) ಯೋಜನೆಯು ಒಂದು.
ಹೌದು, ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಕೇಂದ್ರ ಸರ್ಕಾರ ಸಬ್ಸಿಡಿ ಯೋಜನೆಯನ್ನು(Subsidy scheme) ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್ ಖರೀದಿಸಲು (Tractor purchase) ಸಹಾಯ ಮಾಡುತ್ತದೆ.
ಇದನ್ನೂ ಓದಿ: Heavy rain | ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ..!
ಈ ಯೋಜನೆಗೆ ಅರ್ಜಿ ಸಲ್ಲಿಸಲು, ರೈತರು ಅರ್ಹತಾ ಮಾನದಂಡಗಳನ್ನು ಪೂರೈಸಬೇಕು. ಪ್ರತಿಯೊಬ್ಬ ರೈತರು ಕೇವಲ ಒಂದು ಟ್ರ್ಯಾಕ್ಟರ್ ಮಾತ್ರ ಖರೀದಿಸಬಹುದು. ಇನ್ನು ರೈತರು ಸಹಾಯಧನ ಪಡೆಯಲು ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ, ಟ್ರ್ಯಾಕ್ಟರ್ ಖರೀದಿಯ ಮೇಲೆ 50 ಪರ್ಸೆಂಟ್ ಸಬ್ಸಿಡಿ ಸಿಗಲಿದೆ.