ತರಬೇತಿ ನಿರತ ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ ಅಧಿಕಾರಿಗಳಿಂದ ರಾಷ್ಟ್ರಪತಿ ಭೇಟಿ

ನವದೆಹಲಿ: ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ತರಬೇತಿ ನಿರತ ಅಧಿಕಾರಿಗಳು ಇಂದು (ಡಿಸೆಂಬರ್ 2, 2024) ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಅಧಿಕಾರಿಗಳನ್ನುದ್ದೇಶಿಸಿ…

ನವದೆಹಲಿ: ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ತರಬೇತಿ ನಿರತ ಅಧಿಕಾರಿಗಳು ಇಂದು (ಡಿಸೆಂಬರ್ 2, 2024) ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು, ಭಾರತೀಯ ಕಂದಾಯ ಸೇವೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಏಕರೂಪದ ತೆರಿಗೆ ವ್ಯವಸ್ಥೆ ಮತ್ತು ಹಂಚಿಕೆಯ ಆಡಳಿತಾತ್ಮಕ ಮೌಲ್ಯಗಳ ಮೂಲಕ ನಮ್ಮ ಆರ್ಥಿಕತೆಯನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು. ಈ ಸೇವೆಯು ದೇಶದ ತೆರಿಗೆ ಆಡಳಿತದಲ್ಲಿ ಏಕರೂಪತೆಯನ್ನು ಉತ್ತೇಜಿಸುತ್ತದೆ. ಐ ಆರ್ ಎಸ್ ಅಧಿಕಾರಿಗಳು ಭಾರತ ಸರ್ಕಾರ, ವ್ಯವಹಾರ ಮತ್ತು ವಿವಿಧ ರಾಜ್ಯಗಳ ತೆರಿಗೆ ಆಡಳಿತಗಳ ನಡುವಿನ ಪ್ರಮುಖ ಕೊಂಡಿಯಾಗಿದ್ದಾರೆ. ವಿಶ್ವದಾದ್ಯಂತ ಬದಲಾಗುತ್ತಿರುವ ಸಾಮಾಜಿಕ-ಆರ್ಥಿಕ ಸನ್ನಿವೇಶದಲ್ಲಿ, ರಾಷ್ಟ್ರೀಯ ಹಿತಾಸಕ್ತಿಯ ಕಾರ್ಯಸೂಚಿಯನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ಆರ್ಥಿಕ ಸಹಕಾರದಿಂದ ನಿರ್ಧರಿಸಲಾಗುತ್ತದೆ ಎಂದು ರಾಷ್ಟ್ರಪತಿ ಹೇಳಿದರು. 

ಐಆರ್ ಎಸ್ ಅಧಿಕಾರಿಗಳು ದೇಶದ ಆರ್ಥಿಕ ಗಡಿಗಳ ರಕ್ಷಕರು. ಅವರು ಯಾವಾಗಲೂ ಪ್ರಾಮಾಣಿಕತೆ ಮತ್ತು ಸಮರ್ಪಣೆಯಿಂದ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. 

Vijayaprabha Mobile App free

ಇತರ ದೇಶಗಳೊಂದಿಗೆ ವ್ಯಾಪಾರ ಸೌಲಭ್ಯ ಒಪ್ಪಂದಗಳಲ್ಲಿ ಅವರ ಪಾತ್ರ ಮುಖ್ಯವಾಗಿರುತ್ತದೆ. ಭಾರತೀಯ ಕಂದಾಯ ಸೇವೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಆರ್ಥಿಕ ಅಭಿವೃದ್ಧಿ ಮತ್ತು ಮೂಲಸೌಕರ್ಯ ನಿರ್ಮಾಣ, ಸಾಮಾಜಿಕ-ಆರ್ಥಿಕ ಯೋಜನೆಗಳನ್ನು ನಡೆಸುವುದು, ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವುದು ಇತ್ಯಾದಿಗಳಿಗೆ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ದೇಶಕ್ಕೆ ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದರು. 

ಇದು ರಾಷ್ಟ್ರ ನಿರ್ಮಾಣದಲ್ಲಿ ಐ ಆರ್ ಎಸ್ ಅಧಿಕಾರಿಗಳ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಆಡಳಿತಗಾರರಾಗಿ ತಮ್ಮ ಪಾತ್ರವನ್ನು ಪೂರೈಸಲು, ಅವರು ಪಾರದರ್ಶಕವಾದ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.