ವಿಜಯನಗರ: ಮಹಾಮಳೆಯಿಂದಾಗಿ ಕರ್ನಾಟಕದ ಜಲಾಶಯಗಳು ಭರ್ತಿಯಾಗುತ್ತಿದ್ದು, ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿದ್ದು, ಒಳಹರಿವು ಹೆಚ್ಚಿರುವುದರಿಂದ ನದಿಗೆ ಹೆಚ್ಚು ನೀರು ಬಿಡಲಾಗುತ್ತಿದ್ದು, ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.
ಹೀಗಾಗಿ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ಮುಳುಗುವ ಭೀತಿ ಎದುರಾಗಿದ್ದು, ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ ಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ತುಂಗಭದ್ರಾ ನದಿ ಪಾತ್ರಕ್ಕೆ ಹೊಂದಿಕೊಂಡಿದೆ.
ಇನ್ನು, ಒಂದೂವರೆ ಲಕ್ಷ ಕ್ಯೂಸೆಕ್ ನೀರು ಯಾವುದೇ ಕ್ಷಣದಲ್ಲೂ ನದಿಗೆ ಹರಿಸಲಾಗುವುದು. ಜನ ಮುನ್ನೆಚ್ಚರಿಕೆ ವಹಿಸಬೇಕೆಂದು ಜಲಾಶಯ ಆಡಳಿತ ಮಂಡಳಿಯಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ.
ಇನ್ನು, ಕೆ ಆರ್ ಎಸ್ ,ನಾರಾಯಣಪುರ ಕಬಿನಿ, ಹಾರಂಗಿ & ಹೇಮಾವತಿ ಡ್ಯಾಂಗಳು ಭರ್ತಿಯಾಗಿವೆ. ಆಲಮಟ್ಟಿ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.