ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಕುರಿತು ಅಧಿಕಾರಿಗಳಿದಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ…

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

Vijayaprabha Mobile App free

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.