ದಾವಣಗೆರೆ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತುಂಗಾಭದ್ರಾ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದಾವಣಗೆರೆ ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಹೌದು, ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ್ದು, ಹೊನ್ನಾಳಿ ತಾಲೂಕಿನ 31, ಹರಿಹರ ತಾಲೂಕಿನ 14 ಹಳ್ಳಿಗಳಲ್ಲಿ ಪ್ರವಾಹ ಭೀತಿ ಆತಂಕ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಇರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದ್ದು, ಪ್ರವಾಹ ಭೀತಿ ಇರುವ 50 ಕ್ಕೂ ಹೆಚ್ಚು ಗ್ರಾಮಗಳ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು,10 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.