Holiday : ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ನೀಡಲಾಗಿದೆ.
ಹೌದು, ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ʻಗಾಂಧಿ ಭಾರತʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೀಗಾಗಿ ಬೆಳಗಾವಿ ತಾಲೂಕಿನಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: WhatsApp ನಿಂದ ಬಳಕೆದಾರರಿಗೆ ಫೆಸ್ಟಿವಲ್ ಥೀಮ್ ಘೋಷಣೆ
ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಿಸಲಾಗಿದೆ.
ಇನ್ನು, ಇಂದು ಮತ್ತು ನಾಳೆ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದ್ದು, ಇಂದು ಸಂಜೆ ಪೀರನವಾಡಿಯಲ್ಲಿರುವ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎಲ್ಲರಿಗೂ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ.
ಇದನ್ನೂ ಓದಿ: ಹೊಸ ವರ್ಷದೊಂದಿಗೆ ಜ.1 ರಿಂದ ದೇಶದಲ್ಲಿ ಅನೇಕ ದೊಡ್ಡ ಬದಲಾವಣೆ: ನೀವು ತಿಳಿದುಕೊಳ್ಳಬೇಕಾದ್ದು ಏನು ಗೊತ್ತಾ…?