ರಾಜ್ಯದ ಹಲವೆಡೆ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯ(Heavy Rain) ಸಂಭವವಿದೆ ಎಂದು ಹವಾಮಾನ ಇಲಾಖೆ(Meteorological Department) ಮಾಹಿತಿ ನೀಡಿದೆ.
ಇದನ್ನು ಓದಿ: WhatsApp ಮೂಲಕ LPG ಸಿಲಿಂಡರ್ ಬುಕ್ ಮಾಡುವುದು ಹೇಗೆ? Indane, HP, ಭಾರತ್ ಗ್ಯಾಸ್ ಬುಕ್ ಮಾಡುವ ಸುಲಭ ವಿಧಾನ
ಹೌದು, ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಸೂಚನೆ ನೀಡಿದೆ.
ಇನ್ನು, ರಾಜ್ಯದಲ್ಲಿ ಬೇಸಿಗೆ (Summer) ಮತ್ತಷ್ಟು ಹೆಚ್ಚಾಗುತ್ತಿದ್ದು, ಇದರ ನಡುವೆ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆ ಬೀಳುವ ಸಂಭವವೂ ಇದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ (Temperature) 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಅದರಂತೆ ಬಳ್ಳಾರಿ, ರಾಯಚೂರು, ಶಿವಮೊಗ್ಗ, ಹಾವೇರಿ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ (Temperature) 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನು ಓದಿ: ಪಡಿತರ ಚೀಟಿ, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ..!