ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉನ್ನುಳಿದಂತೆ ರಾಜ್ಯಾದ್ಯಂತ ಹಲವೆಡೆ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಇಂದು ಮತ್ತು ನಾಳೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: 500ರೂ ನೋಟು ನಕಲಿ ಅಥವಾ ಅಸಲಿ ಎಂದು ಗುರುತಿಸುವುದು ಹೇಗೆ? ಈ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳಿ
ಇನ್ನು, ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು,ಬೆಂಗಳೂರಿನ ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ , 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ಧಗೆ ಹೆಚ್ಚಾಗಿರಲಿದ್ದು, ರಾತ್ರಿ ವೇಳೆ ಸೆಕೆಯ ವಾತಾವರಣ ಇರಲಿದೆ. ಇದರ ಜೊತೆ ಉತ್ತರ ಒಳನಾಡು ಹಾಗೂ ದಕ್ಷಿಣದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಅರುಣಾಚಲ, ಅಸ್ಸಾಂ, ಕರಾವಳಿ ಆಂಧ್ರ ಮತ್ತ ಮೇಘಾಲಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ: ಗಮನಿಸಿ: ಪ್ಯಾನ್-ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ಅವಕಾಶ; ಇವರಿಗೆ ಮಾತ್ರ ಕಡ್ಡಾಯವಲ್ಲ..!