ದೇಶದ ರೈತರಿಗೆ ಕೇಂದ್ರ ಸರ್ಕಾರವು ಮತ್ತೊಮ್ಮೆ ಗುಡ್ ನ್ಯೂಸ್ ನೀಡಲು ಹೊರಟಿದ್ದು, ಪಿಎಂ ಕಿಸಾನ್ ಯೋಜನೆ ಬಗ್ಗೆ ಹೊಸ ಅಪ್ಡೇಟ್ ಬಂದಿದೆ.
ವರದಿಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನ ಹಣವು ಏಪ್ರಿಲ್ ತಿಂಗಳಲ್ಲಿ ರೈತರ ಕೈ ಸೇರಬಹುದು ಎನ್ನಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ಪ್ರತಿ ವರ್ಷ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿಗಳಂತೆ ವರ್ಷಕ್ಕೆ 6 ಸಾವಿರ ರೂ. ವರ್ಗಾಯಿಸುತ್ತದೆ.
ಇದುವರೆಗೆ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಒಟ್ಟು 10 ಕಂತುಗಳಲ್ಲಿ ಹಣ ಪಾವತಿ ಮಾಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.