ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವರಾದ ಶ್ರೀ ರಾಮ್‌ ವಿಲಾಸ್‌ ಪಾಸ್ವಾನ್‌(74) ಅವರು ಅವರು ಇಂದು ವಿಧಿವಶರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಚಿರಾಗ್ ಪಾಸ್ವಾನ್ ಮಾಹಿತಿ…

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವರಾದ ಶ್ರೀ ರಾಮ್‌ ವಿಲಾಸ್‌ ಪಾಸ್ವಾನ್‌(74) ಅವರು ಅವರು ಇಂದು ವಿಧಿವಶರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಚಿರಾಗ್ ಪಾಸ್ವಾನ್ ಮಾಹಿತಿ ನೀಡಿದ್ದಾರೆ. ರಾಮ್ ವಿಲಾಸ್ ಪಾಸ್ವಾನ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದರು. ಅವರು  ಚಿಕೆತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಅವರು ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 5 ದಶಕಗಳಿಗಿಂತಲೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಅವರು, ದೇಶದ ಅತ್ಯಂತ ಪ್ರಸಿದ್ಧ ದಲಿತ ನಾಯಕರಲ್ಲಿ ಒಬ್ಬರಾಗಿದ್ದರು.

ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ,  ಬಿ.ಸಿ ಪಾಟೀಲ್, ನಿಖಿಲ್ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸೇರಿದಂತೆ  ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿ ಕೂಡ ವಿಧಿವಶರಾಗಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.