ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಸರ್ಕಾರವು ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದ್ದು, ವಾರಾಂತ್ಯದ ಕರ್ಫ್ಯೂ ತೆಗೆದುಹಾಕಲಾಗಿದೆ.
ಹೌದು, ಕೊರೋನಾ ಉಸ್ತುವಾರಿ ಸಚಿವರು, ಟಾಸ್ಕ್ ಫೋರ್ಸ್ ಸದಸ್ಯರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಜುಲೈ 5ರಿಂದ ಜುಲೈ 19ರವರೆಗೆ 15 ದಿನ ಈ ಮಾರ್ಗಸೂಚಿ ಅನ್ವಯವಾಗಲಿದ್ದು, ರಾತ್ರಿ 9ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.