ರಾಜ್ಯದ 95 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಣಗೊಳಿಸಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ಇಂದು ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆ ಪರಿಶೀಲಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 95 ಶಾಲೆಗಳ ಉನ್ನತೀಕರಣಕ್ಕೆ ಮಂಜೂರಾತಿ ನೀಡಿದೆ.
ಈ ವೇಳೆ ಸರ್ಕಾರವು ಗದಗ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ ಐಎಎಸ್ ಅಧಿಕಾರಿ ಎಸ್.ಹೊನ್ನಾಂಬ ಅವರ ನೇಮಕಾತಿಯನ್ನು ತಡೆ ಹಿಡಿದಿದ್ದು, ಜಿಆರ್ಜೆ ದಿವ್ಯಾ ಪ್ರಭು ಅವರನ್ನು ಗದಗದ ನೂತನ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಮುನ್ಸಿಪಾಲ್ ಡಾಟಾ ಸೊಸೈಟಿಯ ಜೆಡಿಯನ್ನಾಗಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಿದೆ.