ರೈಲು ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶ: ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಉಂಟಾಗಿದ್ದು, 150ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ…

ಉತ್ತರ ಪ್ರದೇಶ: ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಉಂಟಾಗಿದ್ದು, 150ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿವೆ.

ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಧಾವಿಸಿರುವ ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ಸಿಬ್ಬಂದಿ, ಹಾಗೂ ಪೊಲೀಸರು ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

ರೈಲ್ವೆ ನೌಕರರಿಗಾಗಿ ವಾಹನ ಪಾರ್ಕಿಂಗ್ ಸ್ಟ್ಯಾಂಡ್ ನಿರ್ಮಿಸಲಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹಲವು ವಾಹನಗಳು ಸುಟ್ಟು ಹೋಗಿವೆ. ಅಗ್ನಿ ದುರಂತದಿಂದ ಭಾರಿ ಹಾನಿಯುಂಟಾಗಿದೆ ಎಂದು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.