ಹೊಸಪೇಟೆ: ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಹಿನ್ನಲೆ, ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್‌ನಲ್ಲಿ ₹50 ಕೋಟಿ ಮೀಸಲಿಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದು, ಅದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ’ ಎಂದು ಸಚಿವ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ.
ಹೊಸಪೇಟೆಯಲ್ಲಿಂದು ಮಾತನಾಡಿದ ಸಚಿವ ಆನಂದ್ ಸಿಂಗ್ ಅವರು, ನೂತನ ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ಕಂದಾಯ ಇಲಾಖೆಯ ಹಣ ಕೂಡ ಬಳಸಿಕೊಳ್ಳಬಹುದಾಗಿದ್ದು, ಅದಕ್ಕೆ ಕಂದಾಯ ಇಲಾಖೆ ಒಪ್ಪಿಗೆ ನೀಡಿದೆ.
ಇನ್ನು ಇಷ್ಟರಲ್ಲೇ ವಿಜಯನಗರ ಜಿಲ್ಲೆಗೆ ವಿಶೇಷ ಅಧಿಕಾರಿ ಬರಲಿದ್ದು, ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿರುವುದಾಗಿ ಆನಂದ್ ಸಿಂಗ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.