ಸಮಸ್ಯೆಗಳ ಮೂಟೆ ಹೊತ್ತ ಗ್ರಾಮಗಳಿಗೆ ‘ಗಾಂಧಿ ಗ್ರಾಮ’ ಗರಿ; ಇದು ಮಹಾತ್ಮಾ ಗಾಂಧಿಗೆ ಮಾಡುತ್ತಿರುವ ಅವಮಾನ: ಬಿ ವೈ ವಿಜಯೇಂದ್ರ

Vijayendra tweet : ಎಲ್ಲಿ ನೋಡಿದರಲ್ಲಿ ಕಸದ ರಾಶಿ, ರಸ್ತೆಯ ಮೇಲೆ ಕೊಳಚೆ ನೀರು ಹರಿಯುವ ಗ್ರಾಮ ಪಂಚಾಯಿತಿಗಳಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ ನೀಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಲ್ಲದೇ ಮಹಾತ್ಮಾ ಗಾಂಧಿ ಅವರಿಗೆ ಕಾಂಗ್ರೆಸ್…

B Y Vijayendra

Vijayendra tweet : ಎಲ್ಲಿ ನೋಡಿದರಲ್ಲಿ ಕಸದ ರಾಶಿ, ರಸ್ತೆಯ ಮೇಲೆ ಕೊಳಚೆ ನೀರು ಹರಿಯುವ ಗ್ರಾಮ ಪಂಚಾಯಿತಿಗಳಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ ನೀಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಲ್ಲದೇ ಮಹಾತ್ಮಾ ಗಾಂಧಿ ಅವರಿಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದೊಡ್ಡ ಅವಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹೌದು, ಈ ಕುರಿತು ಟ್ವೀಟ್ ಮಾಡಿರುವ ವಿಜೇಯೇಂದ್ರ ಅವರು, ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ತುಂಬಿರುವ, ರಸ್ತೆಯ ಮೇಲೆ ಕೊಳಚೆ ನೀರು ಹರಿಯುವ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸದ, ಸ್ವಚ್ಛತೆಯನ್ನೇ ಕಾಪಾಡದ, ಸಮಸ್ಯೆಗಳ ಮೂಟೆಯನ್ನೇ ಹೊತ್ತ ಕಲಬುರಗಿ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ ನೀಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಲ್ಲದೇ ಮಹಾತ್ಮಾ ಗಾಂಧಿ ಅವರಿಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದೊಡ್ಡ ಅವಮಾನ.

ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ; ತಪ್ಪು ಮಾಹಿತಿ ನೀಡಬೇಡಿ : ರತನ್‌ ಟಾಟಾ

Vijayaprabha Mobile App free

ಸಚಿವ ಪ್ರಯಾಂಕ್ ಖರ್ಗೆ ಅವರ ತವರು ಜಿಲ್ಲೆಯಲ್ಲೇ ಈ ಪರಿಯ ದುಸ್ಥಿತಿಯಾದರೆ, ರಾಜ್ಯದ ಪರಿಸ್ಥಿತಿ ಎಲ್ಲಿಗೆ ಮುಟ್ಟಿರಬಹುದು? ದೇಶವನ್ನು ಬಯಲು ಶೌಚ ಮುಕ್ತ ಮಾಡಲು ಪ್ರಧಾನಿ ಮೋದಿ ಅವರು ನೂರಾರು ಕೋಟಿ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡುತ್ತಿದ್ದಾರೆ. ಆ ಹಣವನ್ನೂ ಸಮರ್ಪಕವಾಗಿ ಬಳಸಿಕೊಂಡು ಸ್ವಚ್ಛತೆ ಕಾಪಾಡದ ಜಿಲ್ಲಾಡಳಿತ ಹಾಗೂ ಬೊಕ್ಕಸ ಬರಿದಾಗಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಟ್ಟಿರುವ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ಜನರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಸರ್ಕಾರದ ಈ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.