Ganesh festival Rules | ಈ ವರ್ಷದ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮ೦ಡಳಿಯು ಕೆಲವು ನಿರ್ದೇಶನಗಳನ್ನು ನೀಡಿದೆ. ಕರ್ನಾಕಟದಲ್ಲಿ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಪಾಲಿಸಬೇಕಾದ ನಿಯಮಗಳ ಆದೇಶ ಹೊರಡಿಸಿದೆ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ನಿಯಮಗಳ ವಿವರ ಹೀಗಿದೆ.
ಪಿಒಪಿಗೆ ನಿರ್ಬಂಧ
- ರಾಜ್ಯಾದೆಲ್ಲೆಡೆ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ.
- ಅನಧಿಕೃತವಾಗಿ ತಯಾರಿಸುವ, ಮಾರಾಟ ಮಾಡುವ ವ್ಯಕ್ತಿ & ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು.
ವಿಸರ್ಜನೆ ಹೀಗಿರಬೇಕು
- ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
- ನೈಸರ್ಗಿಕ ಮೂರತಿಯನ್ನೂ ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು.
- ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ ಅಂದರೆ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ನೀರಿಗೆ ಅಲ್ಲದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು.
ವಿಸರ್ಜನೆ ಹೀಗಿರಬೇಕು
- ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ.
- ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವುದು.
ಅನುಮತಿ ಕಡ್ಡಾಯ
- ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು.
- ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಡಿ.ಜೆ ಬಳಕೆ
- ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ.
- ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ಬ್ಯಾಲಿ, ಡಿ.ಜೆ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್ & ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ.
- ಈ ನಿಯಮಗಳನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



