ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗುವಿನ ಜನನವಾಗಿದೆ.
ಈ ಬಗ್ಗೆ ವಿರಾಟ್ ಕೊಹ್ಲಿ ಅವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮಗೆ ಹೆಣ್ಣು ಮಗುವಿನ ಜನನವಾಗಿದ್ದು ನಿಮ್ಮೊಂದಿಗೆ ಹಂಚಿಕೊಳ್ಳಲು ರೋಮಾಂಚನಗುತ್ತಿದೆ.ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇಲ್ಲಿಂದ ನಮ್ಮ ಹೊಸ ಜೀವನ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿರುಷ್ಕಾ ದಂಪತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಈಚೆಗೆ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ಕೊಹ್ಲಿ ಪಿತೃತ್ವ ರಜೆ ಪಡೆದು ತವರಿಗೆ ವಾಪಾಸ್ ಬಂದಿದ್ದರು.
— Virat Kohli (@imVkohli) January 11, 2021
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.