ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ; ಇವೆಲ್ಲ ಬಿಜೆಪಿ ಪಕ್ಷದ ಹಣೆಬರಹ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ…

Siddaramaih vijayaprabha

ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ -ಇವೆಲ್ಲ ನಿಮ್ಮ ಪಕ್ಷದ ಹಣೆಬರಹ.ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ತ್ವರಿತವಾಗಿ ಏನಾದರೂ ಕ್ರಮ ಕೈಗೊಂಡು, ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೆಲ್ಲ ರಾಜ್ಯ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.