ಇಂದು ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ; 2 ಸಿದ್ಧಾಂತಗಳ ನಡುವಿನ ಹೋರಾಟವೆಂದ ಸಿನ್ಹಾ

ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಎನ್‌‌ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಉಮೇದುವಾರರಾಗಿ…

ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಎನ್‌‌ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಉಮೇದುವಾರರಾಗಿ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಕಣದಲ್ಲಿದ್ದಾರೆ.

ಸದ್ಯ ರಾಷ್ಟ್ರವ್ಯಾಪಿ 10,86,431 ಮತಗಳಿದ್ದು, NDA ಬಳಿ 6 ಲಕ್ಷಕ್ಕೂ ಅಧಿಕ ಮತಗಳಿದ್ದು, ಮುರ್ಮುನೇ ಮುಂದಿನ ರಾಷ್ಟ್ರಪತಿ ಎನ್ನುವ ಲೆಕ್ಕವನ್ನು NDA ಮಿತ್ರ ಕೂಟ ಹಾಕಿದೆ.

‘ರಾಷ್ಟ್ರಪತಿ ಚುನಾವಣೆ 2 ಸಿದ್ಧಾಂತಗಳ ನಡುವಿನ ಹೋರಾಟ’:

Vijayaprabha Mobile App free

ಮುಂದಿನ ರಾಷ್ಟ್ರಪತಿಯಾಗಿ ಮುರ್ಮು ಆಯ್ಕೆಯಾದರೆ ಅವರು ಪ್ರಜಾಸತ್ತಾತ್ಮಕ ಭಾರತವನ್ನು ಕಮ್ಯುನಿಸ್ಟ್ ಚೀನಾದ ನಕಲನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವವರ ನಿಯಂತ್ರಣದಲ್ಲಿರುತ್ತಾರೆಂದು ವಿಪಕ್ಷ ಅಭ್ಯರ್ಥಿ ಯಶವಂತ ಸಿನ್ಹಾ ತಮ್ಮ ಕೊನೆಯ ಪ್ರಚಾರ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಒಂದು ರಾಷ್ಟ್ರ, ಒಂದು ಪಕ್ಷ, ಓರ್ವ ಸರ್ವೋಚ್ಚ ನಾಯಕ. ಇದನ್ನು ನಿಲ್ಲಿಸಲು ನನಗೆ ಮತ ನೀಡಿ. ಅಲ್ಲದೇ ಇದು ಇಬ್ಬರು ವ್ಯಕ್ತಿಗಳ ನಡುವಿನ ಹೋರಾಟವಲ್ಲ, ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.