ಬೆಂಗಳೂರು: ಮೂತ್ರ ವಿಸರ್ಜನೆ ವೇಳೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಕಿಮ್ಕೊ ಜಂಕ್ಷನ್ ಬಳಿ ನಡೆದಿದೆ.
ಹೌದು, ಚಾಮರಾಜಪೇಟೆಯ ಬಾಲ ಮತ್ತು ರಾಜಮಣಿ ಮೃತ ದುರ್ದೈವಿಗಳಾಗಿದ್ದು, ಮದ್ಯದ ಅಮಲಿನಲ್ಲಿದ್ದ ಇಬ್ಬರೂ ಮೂತ್ರ ವಿಸರ್ಜನೆಗೆಂದು ಕಟ್ಟಡದ ಬಳಿ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಇನ್ನು, ನಿರಂತರವಾಗಿ ಮಳೆ ಸುರಿದಿದ್ದರಿಂದ ಗೋಡೆ ಏಕಾಏಕಿ ಕುಸಿದಿದ್ದು, ಕಟ್ಟಡದ ಅವಶೇಷಗಳಡಿ ಮೃತದೇಹ ಪತ್ತೆಯಾಗಿದ್ದು, ಬೆಂಗಳೂರಿನ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.