ವಿಜಯನಗರ: ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಿಂದ ಮತ್ತೆ ನೀರು ಹೊರಕ್ಕೆ ಬಿಡಲಾಗಿದ್ದು, ಜಲಾಶಯದಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರನ್ನು ಟಿಬಿ ಬೋರ್ಡ್ ನದಿಗೆ ಹರಿಸಲಾಗಿದೆ.
ಹೌದು, ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆ, ನದಿಗೆ ನೀರು ಹರಿಸಲಾಗುತ್ತಿದ್ದು, ಜಲಾಶಯದ 20 ಗೇಟ್ಗಳನ್ನು 2.50 ಅಡಿ, 10 ಗೇಟ್ಗಳನ್ನು 1.50 ಅಡಿ ಎತ್ತರಿಸಿ ನದಿಗೆ ನೀರು ಬಿಡಲಾಗುತ್ತಿದೆ.
ಈ ಹಿನ್ನೆಲೆ ವಿಜಯನಗರ ಜಿಲ್ಲೆಯ ವಿಶ್ವವಿಖ್ಯಾತ ಹಂಪಿಯ ಹಲವು ಸ್ಮಾರಕಗಳು ಜಲಾವೃತವಾಗಿದ್ದು, ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನಗಳ ಮಂಟಪ ಮುಳುಗಡೆಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.