ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 28 ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಚಳಿ ಹೆಚ್ಚಾಗಿರುವ ಹಿನ್ನೆಲೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು, ಬಿಸಿಲು ನಾಡು ಜಿಲ್ಲೆಗಳಲ್ಲೂ ಕೂಡ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಬೀದರ್, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ದಟ್ಟವಾದ ಮಂಜಿನ ಜೊತೆ ಇಬ್ಬನಿ ಬೀಳುತ್ತಿದೆ.
ಅಷ್ಟೇ ಅಲ್ಲದೆ, ವರುಣ ಆರ್ಭಟ ನಿಲ್ಲಿಸಿದ್ದರೂ, ದೇಶದ ಹಲವೆಡೆ ಇನ್ನೂ ಸಹ ಮಳೆಯಾಗುತ್ತಿದ್ದು, ಹಿಮಪಾತ, ದಟ್ಟ ಮಂಜಿನ ಜೊತೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.