ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲ ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖಾಂಶಗಳು ಹೀಗಿವೆ.
1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಳದ ಬಗ್ಗೆ ಚರ್ಚಿಸಿ ವರದಿ ನೀಡಲು ಸಚಿವ ಸಂಪುಟದ ಉಪಸಮಿತಿ ರಚನೆ.
2. ನೂತನ ವಿಜಯನಗರ ಜಿಲ್ಲೆ ರಚಿಸಲು ಸಚಿವ ಸಂಪುಟದಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಯಿತು.
3. ದಕ್ಷಿಣ ಕನ್ನಡ ಜಿಲ್ಲೆಯ ಮೆನ್ನಬೆಟ್ಟು, ಕಿನ್ನಿಗೋಳಿ ಹಾಗೂ ಕಟೀಲು ಗ್ರಾಮ ಪಂಚಾಯಿತಿಗಳನ್ನು ಒಟ್ಟುಗೂಡಿಸಿ ಕಟೀಲು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ ಕೈಗೊಳ್ಳಲಾಲಾಯಿತು.
4.ಹರಿಹರ ನಗರಸಭೆ ವ್ಯಾಪ್ತಿಗೆ ಗುತ್ತೂರು ಮತ್ತು ಬಕ್ಕಾಪುರ ಗ್ರಾಮ ಪಂಚಾಯಿತಿಗಳ ಸೇರ್ಪಡೆಗೊಳಿಸಲು ತೀರ್ಮಾನ ಕೈಕೊಳ್ಳಲಾಯಿತು.
5.ಕೃಷ್ಣ ಭಾಗ್ಯ ಜಲ ನಿಗಮಕ್ಕೆ 500 ಕೋಟಿ ರೂ., ಕರ್ನಾಟಕ ನೀರಾವರಿ ನಿಗಮಕ್ಕೆ 650 ಕೋಟಿ ರೂ., ಕಾವೇರಿ ನೀರಾವರಿ ನಿಗಮಕ್ಕೆ 250 ಕೋಟಿ ರೂ., ವಿಶ್ವೇಶ್ವರಯ್ಯ ಜಲ ನಿಗಮಕ್ಕೆ 250 ಕೋಟಿ ರೂ. ಸಾಲ ಪಡೆಯಲು ಸರ್ಕಾರಿ ಖಾತರಿ ನೀಡಿ ಆದೇಶ ಹೊರಡಿಸಿದ ಕ್ರಮಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಯಿತು.
6.ಡಿಸೆಂಬರ್ 7 ರಿಂದ 15 ವರೆಗೆ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.