ರಾಜ್ಯ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ‘ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಮಾ. 29 ನೀತಿ ಸಂಹಿತೆ ಜಾರಿ, ಚುನಾವಣಾ ಅಧಿಸೂಚನೆ ಏ.13 ರಂದು ಪ್ರಕಟವಾಗಲಿದೆ. ಅದರಂತೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ. 20, ನಾಮಪತ್ರ ಪರಿಶೀಲನೆ ಏ. 21, ನಾಮಪತ್ರ ಹಿಂಪಡೆಯಲು ಏ. 24 ಕೊನೆಯ ದಿನವಾಗಿದೆ ಎಂದರು.
ಈ ಬಾರಿ 5 ಕೋಟಿ 21 ಲಕ್ಷ ಮತದಾರರು
ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 5 ಕೋಟಿ 21 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 2 ಕೋಟಿ 62 ಲಕ್ಷ ಪುರುಷ ಮತದಾರ, 2 ಕೋಟಿ 59 ಲಕ್ಷ ಮಹಿಳಾ ಮತದಾರರು ಹಾಗೂ 4,699 ತೃತೀಯ ಲಿಂಗ ಮತದಾರರು ಇದ್ದಾರೆ.
ಇದನ್ನು ಓದಿ: ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್
ಒಟ್ಟು 58,282 ಮತಗಟ್ಟೆಗಳು, ಏನಿದೆ ವ್ಯವಸ್ಥೆ?
* ಒಟ್ಟು 58,282 ಮತಗಟ್ಟೆಗಳು
* ಗ್ರಾಮೀಣ ಪ್ರದೇಶದ ಮತಗಟ್ಟೆಗಳು: 34,219
* ನಗರ ಪ್ರದೇಶದ ಮತಗಟ್ಟೆಗಳು: 24,063
* ಸೂಕ್ಷ್ಮ ಪ್ರದೇಶದ ಮತಗಟ್ಟೆಗಳು: 12,000
* ಸರಾಸರಿ 883 ಮತದಾರರಿಗೆ ಒಂದು ಕೇಂದ್ರ
* ಮಹಿಳಾ ಮತದಾನ ಕೇಂದ್ರಗಳು- 1320
* ಯುವ ಮತದಾನ ಕೇಂದ್ರಗಳು- 224
* ಪಿಡಬ್ಲ್ಯುಡಿ ಮ್ಯಾನೇಜ್ ಮತ ಕೇಂದ್ರಗಳು- 224
* ಮಾದರಿ ಮತ ಕೇಂದ್ರಗಳು- 240
* ವೆಬ್ ಕಾಸ್ಟಿಂಗ್ -29,141 (50%)
ಇದನ್ನು ಓದಿ: ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?
16,976 ಶತಾಯುಷಿ ಮತದಾರರು:
ಕರ್ನಾಟಕದ ಚುನಾವಣೆಯಲ್ಲಿ ಮೊದಲ ಬಾರಿಗೆ 9.17 ಲಕ್ಷಕ್ಕೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ. 17 ವರ್ಷಕ್ಕೂ ಮೇಲ್ಪಟ್ಟ ಯುವಕರಿಂದ 1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಏ.1, 2023ರ ವೇಳೆಗೆ 18 ವರ್ಷ ತುಂಬುವ ಯುವಕರಿಂದ ಸುಮಾರು 41,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.
ಇದನ್ನು ಓದಿ: 500ರೂ ನೋಟು ನಕಲಿ ಅಥವಾ ಅಸಲಿ ಎಂದು ಗುರುತಿಸುವುದು ಹೇಗೆ? ಈ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳಿ
80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ
ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೇ 24 ರಂದು ವಿಧಾನಸಭೆಯ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಅದರೊಳೆಗೆ ಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಕ್ತಾಯಗೊಳಿಸಲಾಗುತ್ತದೆ.
ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ