ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ; ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆ : ಯುವನಿಧಿ ಯೋಜನೆಯಡಿ (Yuva Nidhi Yojana) ಅರ್ಹ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ರಾಜ್ಯಾದ್ಯಂತ ಎಲ್ಲ ಅಂಗೀಕೃತ ವಿಶ್ವವಿದ್ಯಾನಿಲಯಗಳ ಮತ್ತು ಜಿಲ್ಲಾ ಉದ್ಯೋಗ ವಿನಿಮಯ…

Yuva Nidhi Yojana

ಯುವನಿಧಿ ಯೋಜನೆ : ಯುವನಿಧಿ ಯೋಜನೆಯಡಿ (Yuva Nidhi Yojana) ಅರ್ಹ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ರಾಜ್ಯಾದ್ಯಂತ ಎಲ್ಲ ಅಂಗೀಕೃತ ವಿಶ್ವವಿದ್ಯಾನಿಲಯಗಳ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ಜನವರಿ 20 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

2023 ಹಾಗೂ 2024ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆಯಾದ ಅಭ್ಯರ್ಥಿಗಳು ಅಭಿಯಾನದ ಪ್ರಯೋಜನ ಪಡೆದುಕೊಳ್ಳಬಹುದು. ಈ ಯೋಜನೆ ಮೂಲಕ ಪ್ರತಿ ತಿಂಗಳು ₹3000 – ₹1500 ಪಡೆದುಕೊಳ್ಳಬಹುದು.

ಇದನ್ನೂ ಓದಿ: HMPV vs COVID-19 ನಡುವಿನ ವ್ಯತ್ಯಾಸವೇನು? ಯಾವುದು ಡೇಂಜ‌ರ್?

Vijayaprabha Mobile App free

ಯುವನಿಧಿ ಯೋಜನೆಯ ಫಲಾನುಭವಿಗಳು ಈ ರೀತಿಯಾಗಿ ಅರ್ಜಿ ಸಲ್ಲಿಸಬಹುದು

ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhus.karnataka ಮೂಲಕ ಅರ್ಜಿ ಸಲ್ಲಿಸಬಹುದು.

ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗಿದ್ದು, ಪ್ರತಿ ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ ಎಂಬುದನ್ನು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Crop Insurance Scheme | ರೈತರಿಗಾಗಿ ಬೆಳೆ ವಿಮೆ ಯೋಜನೆ; ಪ್ರಯೋಜನ, ಮಾನದಂಡಗಳು, ಅರ್ಜಿ ಸಲ್ಲಿಕೆ

ಯುವನಿಧಿ ಯೋಜನೆ ನೋಂದಣಿಗೆ ಈ ದಾಖಲೆಗಳು ಕಡ್ಡಾಯ

ರಾಜ್ಯ ಸರ್ಕಾರವು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿಗೆ ತಂದಿದೆ. ಯುವನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ರೂ.1500 ಒದಗಿಸುವ ಅಭೂತಪೂರ್ವ ಯೋಜನೆ ಇದಾಗಿದೆ.

ಈ ಯೋಜನೆಗೆ SSLC, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಸೇರಿದಂತೆ ನೋಂದಣಿಗೆ ಅಗತ್ಯವಿರುವ ದಾಖಲಾತಿಗಳೊಂದಿಗೆ http://sevasindhugs.karnataka.gov.in ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುಡಗಿದ್ದು, ಗ್ರಾಮ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PM-AASHA | ಕೃಷಿ ಕ್ಷೇತ್ರವನ್ನು ಉತ್ತೇಜಿಸಲು ಪಿಎಂ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ; ಉದ್ದೇಶ, ಉಪಯೋಗಗಳು, ಅರ್ಜಿ ಸಲ್ಲಿಕೆ

ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಯಾರೆಲ್ಲಾ ಅರ್ಹರು?

ಯುವನಿಧಿ ಯೋಜನೆಯ ಸೌಲಭ್ಯ ಪಡೆಯುವ ಫಲಾನುಭವಿಗಳು ಕರ್ನಾಟಕ ರಾಜ್ಯದವರಾಗಿರಬೇಕಾಗಿದ್ದು, 2023- 24ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ ಉದ್ಯೋಗ ಸಿಗದವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ರಾಜ್ಯದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ ಡಿಪ್ಲೊಮಾ, ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡಿರಬೇಕಾಗಿದ್ದು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು ಸಹ ಅರ್ಜಿ ಸಲ್ಲಿಸಬಹುದು.
Info Kannada

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.