RCB next target : ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಹ್ಯಾಟ್ರಿಕ್ ಗೆಲುವಿಗಾಗಿ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮುಂದಿನ ಪಂದ್ಯದ ದಿನಾಂಕ & ಸ್ಥಳದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
RCBಯ ಮುಂದಿನ ಟಾರ್ಗೆಟ್ ಯಾರು?
ಸಿಎಸ್‌ಕೆ ವಿರುದ್ಧ ಜಯಗಳಿಸಿದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಕ್ಕಾಗಿ ತವರು ಬೆಂಗಳೂರಿಗೆ ಬಂದಿದೆ. ಆರ್‌ಸಿಬಿಯ ಮುಂದಿನ ಪಂದ್ಯ ಬುಧವಾರ (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾ೦ಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿದೆ.
ಪಂದ್ಯ ಎಷ್ಟು ಗಂಟೆಗೆ ಪ್ರಾರಂಭ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮು೦ದಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಶುರುವಾಗಲಿದೆ. ಪಂದ್ಯ ಪ್ರಾರಂಭಕ್ಕೂ ಮೊದಲು ಸಂಜೆ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
RCB ಸಂಭಾವ್ಯ ಪ್ಲೇಯಿಂಗ್ 11
ಫಿಲ್ ಸಾಲ್ಟ್ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್ ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.
GT ಸಂಭಾವ್ಯ ಪ್ಲೇಯಿಂಗ್ 11
ಶುಭನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋಡ್್ರ, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.