ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ‘ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ? ವಿದ್ಯಾರ್ಥಿಗಳೇನು ಭಯೋತ್ಪಾದಕರೆ?’ ಎಂದಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಕೊಮ್ಮಘಟ್ಟ-ಕೆಂಗೇರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಅಲ್ಲಿನ ಅಂಗಡಿ, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದ್ದು, ಧಾನಿ ಸಂಚರಿಸುವ ಮಾರ್ಗದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ? ವಿದ್ಯಾರ್ಥಿಗಳೇನು ಭಯೋತ್ಪಾದಕರೆ?’ ಎಂದಿದ್ದು, ‘ವಿದ್ಯಾರ್ಥಿಗಳೇನು ಗಲಾಟೆ ಮಾಡುತ್ತಾರಾ? ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಆ ಸಂಸ್ಕೃತಿ ಇಲ್ಲ. ಪ್ರಧಾನಿಗಳು ಬರುತ್ತಾರೆ, ಹೋಗುತ್ತಾರೆ. ಅವರಿಗೆ ಅಗತ್ಯವಿರುವ ಭದ್ರತೆ ನೀಡಿ ಎಂದು ಪ್ರತಿಕ್ರಿಯಿಸಿದ್ದಾರೆ.




