ದಾವಣಗೆರೆ ಸಮೀಪದ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಮಹಿಳೆ ದುಡಿಯಲು ಹೊಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು, ಹೊರನಾಡು ಗ್ರಾಮದಲ್ಲಿ ಅಡಿಕೆ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದ್ದು,ಮೃತ ಯುವತಿ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಪ್ರಿಯಾಂಕಾ (20) ಎಂದು ಗುರುತಿಸಲಾಗಿದೆ.
ತನ್ನ ಕುಟುಂಬದೊಂದಿಗೆ ಕೂಲಿ ಕೆಲಸ ಅರಸಿ ಹೊರನಾಡು ಗ್ರಾಮಕ್ಕೆ ಬಂದಿದ್ದ ಮಹಿಳೆ, ಸ್ಥಳೀಯ ಅಡಿಕೆ ತೋಟದ ಮಾಲಕರೊಬ್ಬರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಕೂಲಿ ಕೆಲಸಕ್ಕೆ ಬಂದಿದ್ದ ಪ್ರಿಯಾಂಕ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಮರ ಆಕೆಯ ತಲೆಗೆ ರಭಸವಾಗಿ ತಾಗಿದ ಪರಿಣಾಮ ತೀವ್ರ ಪೆಟ್ಟಾಗಿ ಪ್ರಿಯಾಂಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.