ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, ಬೆಂಗಳೂರಿನ ಕಾಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಹಿಳೆಯ ಸಹೋದರ, ಪತಿ ಮತ್ತು ಮಗಳು ಆ ವ್ಯಕ್ತಿಯ ಮೇಲೆ ಮಾರಣಾಂತಿಕ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ಆತನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಕಿಶೋರ್ ಕೊಲೆಯಾದ ದುರ್ದೈವಿಯಾಗಿದ್ದು, ಅರುಂಧತಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆ ತನ್ನ ಸ್ನೇಹಿತನೊಂದಿಗೆ ಇದ್ದಾಗ ಆಕೆಯ ಸಹೋದರ, ಪತಿ ಮತ್ತು ಮಗಳು ಏಕಾಏಕಿ ದಾಳಿ ನಡೆಸಿ ಆಕೆಯ ಮೇಲೆ ಹಲ್ಲೆ ಮಾಡಿದ್ದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.