ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬರುತ್ತಾರೆ ಎಂದಾದರೆ ಅದು ವಿಶ್ವದ 8ನೇ ಅದ್ಭುತವಾಗುತ್ತದೆ ಎಂದು ಹೇಳಿದ್ದು, ಸದ್ಯ ಅವರು ಬಿಜೆಪಿಯಲ್ಲಿದ್ದು, ಅಲ್ಲಿಯೇ ಇರಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಹೌದು, ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಕತ್ತಿ ಸಹೋದರರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಅವರನ್ನೇ ಕೇಳಬೇಕು. ಬಿಜೆಪಿಯಿಂದ ಯಾರು ಬರುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದು, ಆ ವಿಚಾರ ಬೆಂಗಳೂರಿನ ಹಂತದಲ್ಲಿರಬಹುದಾಗಿದ್ದು, ಬಜೆಟ್ ಮಂಡನೆ ಬಳಿಕ ಆ ಪರ್ವ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.