WPL 2025 ಫೆಬ್ರವರಿ 14 ರಿಂದ ಪ್ರಾರಂಭ; ಈ ನಾಲ್ಕು ಸ್ಥಳಗಳಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಆಯೋಜನೆ

WPL 2025 : ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಫೆಬ್ರವರಿ 14 ರಿಂದ ಮಹಿಳಾ ಪ್ರೀಮಿಯರ್ ಲೀಗ್ (WPL) ಆರಂಭವಾಗಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಹೌದು, ಕಳೆದ…

WPL 2025

WPL 2025 : ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಫೆಬ್ರವರಿ 14 ರಿಂದ ಮಹಿಳಾ ಪ್ರೀಮಿಯರ್ ಲೀಗ್ (WPL) ಆರಂಭವಾಗಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಹೌದು, ಕಳೆದ ಬಾರಿ ಎರಡು ನಗರಗಳಲ್ಲಿ ನಡೆದಿದ್ದ ಪಂದ್ಯಾವಳಿ ಈ ಬಾರಿ ನಾಲ್ಕು ನಗರಗಳಲ್ಲಿ ಆಯೋಜನೆ ಮಾಡಲಾಗಿದ್ದು,ಬರೋಡಾದಲ್ಲಿ ಬೆಂಗಳೂರು ಮತ್ತು ಗುಜರಾತ್ ನಡುವಿನ ಮೊದಲ ಪಂದ್ಯದೊಂದಿಗೆ ಆರಂಭವಾಗಲಿದೆ.

ಇದನ್ನೂ ಓದಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಗಳ ಟಿಕೆಟ್ ಬಿಡುಗಡೆ ಮಾಡಿದ ಪಿಸಿಬಿ: ಬೆಲೆ ಕೇವಲ ₹310 ಮಾತ್ರ! 

Vijayaprabha Mobile App free

ಬಿಸಿಸಿಐ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಮೆಗಾ ಈವೆಂಟ್‌ನಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿದ್ದು, ಒಟ್ಟು 5 ತಂಡಗಳು ಭಾಗವಹಿಸಲಿವೆ. ಬರೋಡಾ ಜೊತೆಗೆ ಬೆಂಗಳೂರು, ಲಕ್ನೋ & ಮುಂಬೈನ ಮೈದಾನಗಳನ್ನು ಅಂತಿಮಗೊಳಿಸಲಾಗಿದೆ. ಇನ್ನು, ಪಂದ್ಯಾವಳಿ ಫೆಬ್ರವರಿ 14 ರಂದು ಆರಂಭವಾಗಲಿದ್ದು, ಮಾ.15ಕ್ಕೆ ಮುಂಬೈನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.