Banu Mushtaq | ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೊಂಡಿದೆ. ನಾಡ ದೇವತೆ ಚಾಮುಂಡಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು.
ಹೌದು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು. ಈ ವೇಳೆ CM ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ದರು. ಇನ್ನು ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ನಡೆಯಲಿದೆ.
ನಾಡದೇವತೆಗೆ ಪೂಜೆ ಸಲ್ಲಿಸಿದ ಬಾನು ಮುಷ್ತಾಕ್
ಅದಕ್ಕೂ ಮುನ್ನ ಇದೀಗ ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಲೇಖಕಿ ಬಾನು ಮುಷ್ತಾಕ್ ಮಂಗಳಾರತಿ ಪಡೆದರು. ದೇವಿ ದರ್ಶನದ ವೇಳೆ ಬಾನು ಮುಷ್ತಾಕ್ ಭಾವುಕರಾದರು. ಹೂವಿನ ಹಾರ, ಸೀರೆಯನ್ನು ಬಾನು ಮುಷ್ತಾಕ್ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.




