ಯಶಸ್ವಿನಿ ಆರೋಗ್ಯ ವಿಮಾ ಯೋಜನೆ : ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಕರ್ನಾಟಕ ಸರ್ಕಾರ ಪ್ರಾರಂಭಿಸಿದ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದು ಕಡಿಮೆ ಆದಾಯದ ಕುಟುಂಬಗಳಿಗೆ, ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಕೈಗೆಟುಕುವ ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಈ ಯೋಜನೆಯು ಆಸ್ಪತ್ರೆಗೆ ದಾಖಲಾಗುವುದು, ಶಸ್ತ್ರಚಿಕಿತ್ಸೆಗಳು ಮತ್ತು ವಿವಿಧ ಕಾಯಿಲೆಗಳಿಗೆ ಚಿಕಿತ್ಸೆಗಳು ಸೇರಿದಂತೆ ಹಲವಾರು ವೈದ್ಯಕೀಯ ವೆಚ್ಚಗಳನ್ನು ಒಳಗೊಂಡಿದೆ. ಗ್ರಾಮೀಣವಾಸಿಗಳಿಗೆ ರೂಪಗೊಂಡಿರುವ ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆಯಾಗಿದೆ.
ಇದನ್ನೂ ಓದಿ: ಕೃಷಿ ಯಾಂತ್ರೀಕರಣ ಯೋಜನೆ: ಕೃಷಿ ಯಂತ್ರೋಪಕರಣಕ್ಕೆ ಸಹಾಯಧನ? ಸಬ್ಸಿಡಿ ದರದಲ್ಲಿ ಯಾವೆಲ್ಲ ಕೃಷಿ ಯಂತ್ರೋಪಕರಣಗಳು ಸಿಗಲಿವೆ?
ಯಶಸ್ವಿನಿ ಆರೋಗ್ಯ ವಿಮಾ ಯೋಜನೆಗೆ ಯಾರೆಲ್ಲ ಅರ್ಹರು?
ಯಶಸ್ವಿನಿ ಯೋಜನೆಯ ಫಲಾನುಭವಿಯಾಗಲು 75 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳು ಅರ್ಹರು. ಕನಿಷ್ಠ 3 ತಿಂಗಳು ಮುಂಚಿತವಾಗಿ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕಾಗಿದ್ದು, ಗ್ರಾಮೀಣ ಸಹಕಾರ ಸಂಘ ಅಥವಾ ಬ್ಯಾಂಕ್ ಗಳೊಡನೆ ವ್ಯವಹರಿಸುತ್ತಿರುವ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು.
ಇದನ್ನೂ ಓದಿ: ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ | ಅರ್ಹತೆ, ಅರ್ಜಿ ಸಲ್ಲಿಕೆ, ಲಾಭವೇನು?
ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಒಳಪಡದ ಶಸ್ತ್ರಚಿಕಿತ್ಸೆಗಳು
ಯಶಸ್ವಿನಿ ಯೋಜನೆಯಡಿಯಲ್ಲಿ ಯಾವುದೇ ಸಹಕಾರ ಸಂಘದ ಸದಸ್ಯರು ಕನಿಷ್ಠ ಮೊತ್ತದ ಪ್ರಿಮಿಯಂ ಪಾವತಿಸಿ ಕುಟುಂಬದವರ ಹೆಸರು ನೋಂದಣಿ ಮಾಡಿಕೊಂಡು ಹಲವು ವಿಧದ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದ್ದು, ಚರ್ಮದ ಗ್ರಾಫ್ಟಿಂಗ್, ಸ್ಟಂಟ್, ಇಂಪ್ಲಾಂಟ್ಸ್, ಕೀಮೊಥೆರಪಿ, ರೇಡಿಯೋ ಥೆರಪಿ, ಹಲ್ಲಿನ ಶಸ್ತ್ರಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಯೋಜನೆಯಲ್ಲಿ ಸೇರಿರುವುದಿಲ್ಲ. ಇಂತಹ ಅನಾರೋಗ್ಯಗಳಿಗೆ ವೈದ್ಯಕೀಯ ಚಿಕಿತ್ಸೆ, ಔಷಧೋಪಚಾರಗಳ ಹಾಗೂ ಶಸ್ತ್ರಚಿಕಿತ್ಸಾ ವೆಚ್ಚವನ್ನು ಫಲಾನುಭವಿಗಳೇ ಭರಿಸಬೇಕು.
ಇದನ್ನೂ ಓದಿ: PM Kisan | ರೈತರಿಗೆ ಗುಡ್‌ನ್ಯೂಸ್, ಖಾತೆಗೆ 2,000 ರೂ; ಹಣ ಬೇಕಾದ್ರೆ ಈ ಕೆಲಸ ಮಾಡಿ!
ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ದೊರೆಯುವ ಇತರ ಸೌಲಭ್ಯಗಳು
ಯಶಸ್ವಿನಿ ಯೋಜನೆಯಡಿ ಅಂಗೀಕೃತವಾದ ಆಸ್ಪತ್ರೆಗಳಲ್ಲಿ ಫಲಾನುಭವಿಗಳು ಸಾಮಾನ್ಯ ಹೆರಿಗೆ, ನವಜಾತ ಶಿಶುವಿನ ಶುಶ್ರೂಷೆ, ಕೃಷಿ ಉಪಕರಣಗಳಿಂದಾಗುವ ಅಪಘಾತಗಳು, ನೀರಿನಲ್ಲಿ ಮುಳುಗುವುದು, ನಾಯಿಕಡಿತ, ಹಾವು ಕಡಿತ, ವಿದ್ಯುತ್ ಆಘಾತಗಳು ಇತ್ಯಾದಿ ತುರ್ತು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು, ಹೊರರೋಗಿ ಚೆಕ್ ಅಪ್ ಗೆ ರೂ 100, ಸಾಮಾನ್ಯ ಪರೀಕ್ಷೆ ಮತ್ತು ವಿಶೇಷ ತಜ್ಙರಿಂದ ಪರೀಕ್ಷೆ ಮಾಡಿಸಿಕೊಳ್ಳಲು ರೂ 200ಗಳನ್ನು ಪಾವತಿಸಿ ಮೂರು ತಿಂಗಳವರೆಗೆ ಅದೇ ಕಾರ್ಡ್ನಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು.
ಇದನ್ನೂ ಓದಿ: PM Kisan ಯೋಜನೆಯ 19ನೇ ಕಂತಿನ ಕುರಿತು ಮಹತ್ವದ ಮಾಹಿತಿ; ₹2000 ಪಡೆಯಬೇಕಾದರೆ ಈ ಕೆಲಸ ಮಾಡಲೇಬೇಕು!
ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಕ್ಲೈಮ್ ಮಾಡುವುದು ಹೇಗೆ?
ಯಶಸ್ವಿನಿ ಯೋಜನೆಯ ಪ್ರಯೋಜನ ಪಡೆಯಲು ಅದರ ನೆಟ್ವರ್ಕ್ ಆಸ್ಪತ್ರೆಗೆ ಭೇಟಿ ನೀಡಿ. ವೈದ್ಯಕೀಯ ಸಮನ್ವಯ ಅಧಿಕಾರಿಯನ್ನು ಸಂಪರ್ಕಿಸಿ ದಾಖಲೆಗಳನ್ನು ಒದಗಿಸಿ. ನಂತರ ವೈದ್ಯಕೀಯ ಪರೀಕ್ಷೆಗಳಿಗೆ ದಾಖಲಾತಿ ಶುಲ್ಕ ಪಾವತಿಸಿ. ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ನಿರ್ವಹಣಾ ಸೇವಾ ಪೂರೈಕೆದಾರರಿಗೆ (MSP) ವಿನಂತಿಯನ್ನು ಕಳುಹಿಸಲಾಗುತ್ತದೆ. MSP ವಿನಂತಿಯನ್ನು ಪರಿಶೀಲಿಸಿ ಅನುಮೋದನೆ ನೀಡುತ್ತದೆ. ಡಿಸ್ಟಾರ್ಜ್ ಆದ ನಂತರ ಆಸ್ಪತ್ರೆಯು ಡಿಸ್ಟಾರ್ಜ್ ಸಾರಾಂಶ ಮತ್ತು ಬಿಲ್‌ಗಳನ್ನು ಕ್ಲೈಮ್ ಇತ್ಯರ್ಥಕ್ಕಾಗಿ MSPA ಗೆ ಕಳುಹಿಸುತ್ತದೆ.