ಬೆಂಗಳೂರು: ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್ ಕಾರ್ಡ್‌ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ. ಶೀಘ್ರದಲ್ಲೇ 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.