ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ತಮ್ಮ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದ ವಿಚಾರ ಸಂಬಂಧ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರೇ ಖುದ್ದು ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಕಾಶಪ್ಪನವರ್, ತಂದೆ ಸಿಎಂ ಎಂದು ಮನಬಂದಂತೆ ಮಾತನಾಡಬಾರದು. ಯಡಿಯೂರಪ್ಪ ಅವರು ಜೈಲಿಗೆ ಹೋಗಿದ್ದರು. ಅದಕ್ಕೆ ಈ ಪುಣ್ಯಾತ್ಮನೇ ಕಾರಣ. ಈತ ಲಂಚ ತಿಂದಿದ್ದಕ್ಕೆ ಯಡಿಯೂರಪ್ಪ ಜೈಲಿಗೆ ಹೋಗಿ ಬಂದರು. ಯಾರೊಬ್ಬರೂ ಕೂಡ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಬಾರದು ಎಂದು ಬಿ ವೈ ವಿಜೇಯೇಂದ್ರ ವಿರುದ್ದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿಕಾರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.