ತಿಪಟೂರು: ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ.
ಹೌದು, 10ಕ್ಕೂ ಹೆಚ್ಚು ಮಠಾಧೀಶರು ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ‘ಬಿಎಸ್ ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೆಲವರು ಸಿಎಂ ಸ್ಥಾನಕ್ಕೆ ಧಕ್ಕೆ ತರುವ ಹೇಳಿಕೆ ನೀಡುತ್ತಿದ್ದು, ಇಂತಹ ಹೇಳಿಕೆಗಳಿಂದ ನೋವುಂಟಾಗುತ್ತಿದೆ.
ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಕಾರಣ’ ಎಂದು ಮಠಾಧೀಶರು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.