ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಭಾರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಯಾದಗಿರಿ ಹಾಗೂ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಜಿಲ್ಲೆಗಳಲ್ಲಿ “ಆರೆಂಜ್ ಅಲರ್ಟ್” ಘೋಷಣೆ ಮಾಡಲಾಗಿದೆ.
ಇನ್ನು ಉತ್ತರ ಒಳನಾಡಿನ ಭಾಗದ ಗದಗ, ವಿಜಯಪುರ, ಬಾಗಲಕೋಟೆ ಸೇರಿದಂತೆ ದಕ್ಷಿಣ ಒಳನಾಡಿನ ಭಾಗದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, “ಯಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.