Heavy rains in Karnataka : ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ, ನಿರಂತರ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತತ್ತರಿಸಿರುವ ಬೆನ್ನಲ್ಲೇ ಅ.21ರವರೆಗೆ ಮತ್ತೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೌದು, ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಗದಗ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹೀಗಾಗಿ ಈ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲೂ ಮಳೆ ಮುಂದುವರೆಯಲಿದ್ದು ನಾಳೆಯವರೆಗೂ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment