ಲಖನೌ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅಂತರರಾಷ್ಟ್ರೀಯ ಜನಸಂಖ್ಯಾ ದಿನವಾದ ಇಂದು ರಾಜ್ಯದಲ್ಲಿ ‘ಎರಡು ಮಕ್ಕಳ ನೀತಿ’ಯ ಘೋಷಣೆ ಮಾಡುವ ನಿರೀಕ್ಷೆಯಿದೆ.
ಕಳೆದೆರಡು ದಿನಗಳ ಹಿಂದೆ ಯುಪಿ ಸರ್ಕಾರವು ಉದ್ದೇಶಿತ ಜನಸಂಖ್ಯಾ ನಿಯಂತ್ರಣ ಮಸೂದೆಯ ಮೊದಲ ಕರಡನ್ನು ಬಿಡುಗಡೆ ಮಾಡಿದ್ದು, ಇದರನ್ವಯ ಯಾವುದೇ ದಂಪತಿ 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತಿಲ್ಲ. ಹೊಂದಿದ್ದಲ್ಲಿ ಅಂಥ ದಂಪತಿ ರಾಜ್ಯ ಸರ್ಕಾರದ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ.
ಯುಪಿ ಸರ್ಕಾರದ ಈ ನಿಯಮಕ್ಕೆ ಪರ ವಿರೋಧಿಗಳೂ ಕೇಳಿ ಬರುತ್ತಿದ್ದು, 2011ರ ಜನಗಣತಿ ಪ್ರಕಾರ ಉತ್ತರ ಪ್ರದೇಶದ ಜನಸಂಖ್ಯೆ 19,95,81,477 ಕೋಟಿ ಆಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.