ಕೋಲಾರ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ನಡೆದಿದೆ.
ಹೌದು ಕಾವ್ಯ (23) ಮೃತ ದುರ್ದೈವಿಯಾಗಿದ್ದು, 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು.
ನೋಡೋಕೆ ಸುಂದರವಾಗಿದ್ದು, ಒಳ್ಳೆಯ ಕೆಲಸವೂ ಗಿಟ್ಟಿಸಿಕೊಂಡಿದ್ದ ಕಾವ್ಯ ದುರಂತ ಅಂತ್ಯ ಕಾಣಲು ಏನು ಕಾರಣ ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ಬಳಿಕ ಸತ್ಯ ಬಯಲಾಗಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.