ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನು ಸೂರ್ಯ ಮತ್ತು ಶರತ್ ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ 10:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ.
ಇಬ್ಬರೂ ಯುವಕರು ರೈಲ್ವೇ ಹಳಿ ಮೇಲೆ ಕುಳಿತಿದ್ದ ವೇಳೆ ರೈಲು ಅಗಮಿಸಿದ ಪರಿಣಾಮ ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.