Yuva Nidhi Yojana : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ನ.25 ರೊಳಗೆ ಸ್ವಯಂ ಘೋಷಣೆ ಪತ್ರ ನೀಡಬೇಕು.
ಹೌದು, ಯುವನಿಧಿ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದ್ದು, ಪದವಿ ಹಾಗೂ ಡಿಪ್ಲೋಮಾ ಕೋರ್ಸ್‍ಗಳನ್ನು 2022-23 ಹಾಗೂ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ₹3000-₹1500 ನೀರುದ್ಯೋಗ ಭತ್ಯೆಯನ್ನು ನೀಡುತ್ತಿದೆ.
ಇದನ್ನೂ ಓದಿ: Ration card | ಪಡಿತರ ಚೀಟಿ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್
ಹಾಗೆಯೇ ಈಗಾಗಲೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25ನೇ ತಾರೀಖಿನ ಒಳಗೆ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸೇವಾಸಿಂಧು ಪೋರ್ಟಲ್‌ನಲ್ಲಿ http://sevasindhugs.karnataka.gov.in ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ನೀಡಿದರೆ ಮಾತ್ರ ಮುಂದಿನ ತಿಂಗಳ ನಿರುದ್ಯೋಗ ಭತ್ಯೆ ನೀಡಲಾಗುವುದು. ತಪ್ಪಿದಲ್ಲಿ ಮುಂದಿನ ತಿಂಗಳ ನಿರುದ್ಯೋಗ ಭತ್ಯೆ ನೀಡಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.