ತಿರುವನಂತಪುರಂ: ದೇಶದೆಲ್ಲಡೆ ಕೊರೋನಾ ಸೋಂಕಿನ ಆತಂಕ ತುಂಬಿಕೊಂಡಿದ್ದು, ಇದರ ನಡುವೆ ಕೇರಳದಲ್ಲಿ ಮೊದಲ ಬಾರಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.
ಹೌದು, ಮೊದಲು ಕೇರಳದ ಮಹಿಳೆಯೊಬ್ಬರಲ್ಲಿ ಝಿಕಾ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ 10 ಪ್ರಕರಣಗಳು ದೃಢಪಟ್ಟಿರುವುದಾಗಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ಇನ್ನು ಝಿಕಾ ವೈರಸ್ ಎಂಬುದು ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು, ಜ್ವರ, ಸ್ನಾಯು, ಕೀಲುಗಳಲ್ಲಿ ನೋವು, ತಲೆ ನೋವು ಈ ಸೋಂಕಿನ ಪ್ರಮುಖ ಲಕ್ಷಣಗಳಾಗಿದ್ದು, ಈ ಲಕ್ಷಣಗಳು 2ರಿಂದ 7 ದಿನಗಳವರೆಗೆ ಇರುತ್ತವೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.