ದಾವಣಗೆರೆ :ಜಿಲ್ಲೆಯಲ್ಲಿ ಸೆಪ್ಟೆಂಬರ್ 8 ರಂದು ಬಿದ್ದ ಮಳೆಗೆ 0.8 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ ತಾಲ್ಲೂಕಿನಲ್ಲ್ಲಿ 0.3 ಮಿ.ಮೀ, ದಾವಣಗೆರೆ 1.5 ಮಿ.ಮೀ, ಹರಿಹರ 0.8 ಮಿ.ಮೀ, ಹೊನ್ನಾಳಿ 0.5 ಮಿ.ಮೀ, ಜಗಳೂರು 1.0 ಮಿ.ಮೀ, ನ್ಯಾಮತಿಯಲ್ಲಿ 0.2 ಮಿ.ಮೀ ಮಳೆಯಾಗಿದೆ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಮನೆ ತೀವ್ರ ಹಾನಿಯಾಗಿವೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 7 ಮನೆಗಳು ಭಾಗಶ: ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.