ಬೆಂಗಳೂರು: ಅಪಾರ್ಟ್ಮೆಂಟ್ನಿಂದ ಜಿಗಿದು 15 ವರ್ಷದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ.
ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್ಮೆಂಟ್ ನಿವಾಸಿಯಾಗಿದ್ದ ಬಾಲಕಿ 20ನೇ ಮಹಡಿಯಿಂದ ಜಿಗಿದಿದ್ದು, ಧಾರುಣವಾಗಿ ಸಾವನ್ನಪ್ಪಿದ್ದಾಳೆ.
ಬಾಲಕಿ SSLC ವಿದ್ಯಾರ್ಥಿಯಾಗಿದ್ದು ಮಧ್ಯಪ್ರದೇಶ ಮೂಲದ ಕುಟುಂಬ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.