ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ‘ವಿಜಯನಗರ’ ಜೆಲ್ಲೆ: 229 ಕೋಟಿ ರೂ.ವೆಚ್ಚದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.20):ವಿಜಯನಗರ ವಿಧಾನಸಭಾ ಕ್ಷೇತ್ರ,ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೆಆರ್‍ಐಡಿಎಲ್,ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಉಪವಿಭಾಗದ 2021-22ನೇ ಸಾಲಿನ ಡಿ.ಎಂ.ಎಫ್,…

ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.20):ವಿಜಯನಗರ ವಿಧಾನಸಭಾ ಕ್ಷೇತ್ರ,ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೆಆರ್‍ಐಡಿಎಲ್,ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಉಪವಿಭಾಗದ 2021-22ನೇ ಸಾಲಿನ ಡಿ.ಎಂ.ಎಫ್, ಕೆ.ಕೆ.ಆರ್.ಡಿ.ಪಿ(ಮ್ಯಾಕ್ರೋ ಮತ್ತು ಸಿ.ಎಂ.ಡಿ.ಕ್ಯೂ), ಪ್ರವಾಸೋದ್ಯಮ ಇಲಾಖೆ ಅನುದಾನ, ಎಸ್.ಸಿ.ಪಿ ಮತ್ತು ಟಿ.ಎಸ್.ಪಿ, ಪ್ರಗತಿ ಕಾಲೋನಿ, ಶಾಸಕರ ಅನುದಾನ ಮತ್ತು ವಿಶೇಷ ಅನುದಾನ (ವಿಜಯನಗರ ಜಿಲ್ಲೆ ರಚನೆ) ಯೋಜನೆಗಳಡಿ ಮಂಜೂರಾದ ರೂ.22894.26ಲಕ್ಷ ವೆಚ್ಚದ(ರೂ.229 ಕೋಟಿ)ಲ್ಲಿ 67 ವಿವಿಧ ಕಾಮಗಾರಿಗಳಿಗೆ ಮುಜರಾಯಿ,ಹಜ್ ಮತ್ತು ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಹೊಸಪೇಟೆ ನಗರದ ವಿಜಯನಗರ ಕಾಲೇಜು ರಸ್ತೆಯಲ್ಲಿನ ಕುಮಾರ್ ಕ್ಯಾಂಟೀನ್ ಹತ್ತಿರ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರುವುದರ ಮೂಲಕ ವಿಜಯನಗರ ಸಾಮ್ರಾಜ್ಯದ ವೈಭವ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸುತ್ತಿದೆ. ಇದಕ್ಕೆ ಕಾರಣಿಕರ್ತರು ಸಚಿವ ಆನಂದಸಿಂಗ್ ಅವರು. ಈ ವಿಜಯನಗರ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಅತ್ಯಂತ ಮಾದರಿ ಜಿಲ್ಲೆಯಾಗಿ ಹೊರಹೊಮ್ಮುವ ಆಸೆ ಎಲ್ಲರಲ್ಲಿದೆ. ಪೂರ್ವಜನ್ಮದ ಪುಣ್ಯದ ಫಲ ಹಾಗೂ ಋಣಾನುಬಂಧದಿಂದ ಈ ಜಿಲ್ಲೆಯ ಉಸ್ತುವಾರಿ ಸಿಕ್ಕಿದೆ ಎಂದರು.

ಮೊದಲ ಹಂತದಲ್ಲಿ ಜಿಲ್ಲೆ ಅಭಿವೃದ್ಧಿಗೆ ಅಧಿಕಾರಿಗಳು ಬೇಕು. ಇದರಿಂದ ಅಭಿವೃದ್ಧಿಗೆ ವೇಗ ಸಿಗುತ್ತದೆ. ಬಳ್ಳಾರಿಯವರು ಪ್ರಭಾರವಿದ್ದು, ಇಲ್ಲಿ ಅಧಿಕಾರಿಗಳು ಅಗತ್ಯವಿದೆ ಎಂದು ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಮನವಿ ಮಾಡಲಾಗಿದೆ ಎಂದರು.

Vijayaprabha Mobile App free

ವಿವಿಧ ಇಲಾಖೆಗಳಿಗೆ ಸೇರಿದ 67 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಆಧುನಿಕ ಶೈಲಿ ಅಲ್ಲದೆ ವಿಜಯನಗರ ಸಾಮ್ರಾಜ್ಯದ ಕಲ್ಪನೆಯನ್ನು ಬಿಂಬಿಸುವ ಕಟ್ಟಡಗಳ ನಿರ್ಮಾಣ ಮಾಡಲಾಗುವುದು ಎಂದರು.

ಮುಖ್ಯಮಂತ್ರಿಗಳ ನವಕರ್ನಾಟಕ ಇತಿಹಾಸದ ಕನಸು ನನಸಾಗಲು ಎಲ್ಲರೂ ಕೈಜೋಡಿಸಿ. ಇದು ನನ್ನ ತವರುಭೂಮಿ; ಈ ಊರಿನ ಮಗಳಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್ ಅವರು ಮಾತನಾಡಿ, ಪಶ್ಚಿಮ ತಾಲೂಕುಗಳ ಜನರ ಬಹುದಿನಗಳ ಕೂಗಿಗೆ ಮತ್ತು ದಶಕಗಳ ಕಾಲ ನಡೆದ ಹೋರಾಟದ ಫಲವಾಗಿ ಮತ್ತು ಸರಕಾರ ಬಂದರೇ ಸಚಿವ ಸ್ಥಾನ ನೀಡದಿದ್ದರೂ ಜಿಲ್ಲೆಯನ್ನಾಗಿ ಘೋಷಣೆಯಾಗಿಸಿ ಎಂದು ಪಟ್ಟು ಹಿಡಿದಿದ್ದರ ಫಲ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ ಎಂದರು.

ಮಾಡೋಣ ಎನ್ನುವ ನಾಯಕರು ಮತ್ತು ನೋಡೊಣ ಎನ್ನುವ ನಾಯಕರನ್ನು ನೋಡಿದ್ದೇನೆ. ಆದರೆ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲೆಯನ್ನಾಗಿ ಘೋಷಣೆ ಮಾಡುವುದರ ಮೂಲಕ ಮರೆಯಲಾರದ ಇತಿಹಾಸ ಸೃಷ್ಟಿಸುವ ಕೆಲಸ ಮಾಡಿದ್ದಾರೆ.ನಾವು ಅವರನ್ನು ಮರೆಯಬಾರದು ಎಂದರು.

ವಿಜಯನಗರ ಜಿಲ್ಲೆ ಪಂಪಾ ವಿರೂಪಾಕ್ಷೆಶ್ವರರ ಆಶೀರ್ವಾದದಿಂದ ಆಗಿದೆ ಎಂದು ನುಡಿದ ಸಚಿವ ಸಿಂಗ್ ಅವರು ನಾನಿದ್ದಾಗ ಆಗಿದ್ದು ನನ್ನ ಪುಣ್ಯ ಎಂದರು. ಉಸ್ತುವಾರಿ ಸಚಿವರ ಅನುಭವದಿಂದ ಜಿಲ್ಲೆ ಅಭಿವೃದ್ಧಿಯಾಗಲಿದೆ ಎಂಬ ಸದಾಶಯ ವ್ಯಕ್ತಪಡಿಸಿದ ಸಚಿವ ಸಿಂಗ್ ಅವರು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಒಟ್ಟಾಗಿ ಹೋದರೆ ಅಭಿವೃದ್ಧಿ ಎಂದರು.

ಇಡೀ ರಾಜ್ಯಕ್ಕೆ ವಿಜಯನಗರ ಜಿಲ್ಲೆ ಮಾದರಿ ಜಿಲ್ಲೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಿಂಗ್ ಅವರು ಪಂಚಾಯತ್‍ರಾಜ್ ದಿವಸದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವ ಹೊಸಪೇಟೆ ತಾಲೂಕಿನ ಮಲಪನಗುಡಿಗೆ ಆಗಮಿಸುವ ಸಾಧ್ಯತೆ ಇದೆ ಎಂದರು. ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸದ ವೈ.ದೇವೆಂದ್ರಪ್ಪ, ಹುಡಾ ಅಧ್ಯಕ್ಷ ಅಶೋಕ ಜೀರೆ,ನಗರಸಭೆ ಅಧ್ಯಕ್ಷೆ ಸುಂಕಮ್ಮ,ಎಸ್ಪಿ ಡಾ.ಅರುಣ.ಕೆ., ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದ್ದರು. ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಸ್ವಾಗತಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.