ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಫೆ.15 :ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ.…

gm-siddeshwara-vijayaprabha-news

ದಾವಣಗೆರೆ ಫೆ.15 :ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಅವರು ತಿಳಿಸಿದ್ದಾರೆ.

ಸಮಗ್ರ ಕೃಷಿ ಪದ್ದತಿಯನ್ನು ಉತ್ತೇಜಿಸುವ ಹಾಗೂ ಜನಪ್ರಿಯಗೊಳಿಸುವ ಉದ್ದೇಶದಿಂದ ಆವರಗೆರೆಯಲ್ಲಿ ಉತ್ಕøಷ್ಟತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಹಾಗೂ ಕಾಡಜ್ಜಿಯಲ್ಲಿ ಸಂಶೋಧನಾ ಕೇಂದ್ರ ತೆರೆಯಲು ರೂ.4.00 ಕೋಟಿ. ಹೆಚ್ಚು ತರಕಾರಿ ಬೆಳೆಗಳನ್ನು ಬೆಳೆಯುವ ದಾವಣಗೆರೆ ತಾಲ್ಲೂಕಿಗೆ ಶೀಥಲೀಕರಣ ಘಟಕದ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನು ಮನಗಂಡು ಶೀಥಲೀಕರಣ ಘಟಕಕ್ಕೆ ಸಂಸದರಿಂದ ಮನವಿ ಸಲ್ಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ದಾವಣಗೆರೆ ತಾಲ್ಲೂಕಿನ ಆವರೆಗೆರೆ ಕೋಲ್ಡ್ ಸ್ಟೋರೇಜ್ (ಶೀಥಲೀಕರಣ ಘಟಕ) ನಿರ್ಮಾಣ ಮಾಡಲು ರೂ.9.50 ಕೋಟಿ ಅನುದಾನ ಮಂಜೂರಾಗಿದೆ. ಹೊನ್ನಾಳಿ ತಾಲ್ಲೂಕಿನ ಹೆಚ್.ಕಡದಕಟ್ಟೆ ಗ್ರಾಮದಲ್ಲಿ ಸಮಗ್ರ ಕೃಷಿ ಪದ್ದತಿ ಉತ್ತೀಜಿಸಲು ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ ತೆರೆಯಲು 2.17 ಕೋಟಿ ರೂ. ಒದಗಿಸಲಾಗಿದೆ. ಉಳಿದಂತೆ ಕಾಡಜ್ಜಿಯಲ್ಲಿರುವ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 3.00 ಕೋಟಿ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಿಗೆ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 1.50 ಕೋಟಿ, ಜಗಳೂರು ತಾಲ್ಲೂಕಿನ ಚಿಕ್ಕಬಂಟನಹಳ್ಳಿಯಲ್ಲಿರುವ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 1.55 ಕೋಟಿ. ಬಸವಾಪಟ್ಟಣ ಮತ್ತು ತ್ಯಾವಣಿಗೆಯಲ್ಲಿ ಹೊಸ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕಾಗಿ ತಲಾ 60 ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗಿದೆ.

Vijayaprabha Mobile App free

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅನುದಾನ ಒದಗಿಸಿರುವ ಕೇಂದ್ರ ರೈತಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್, ರಾಜ್ಯ ರೈತಕಲ್ಯಾಣ ಸಚಿವರಾದ ಶೋಭಾಕರಂದ್ಲಾಜೆ ಅವರಿಗೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರಿಗೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.